Ashwathnarayan: ಡಿಸಿಎಂ ಅಶ್ವತ್ಥ ನಾರಾಯಣಗೆ ಕೊರೋನಾ ಪಾಸಿಟಿವ್; ಅಧಿವೇಶನಕ್ಕೆ ಗೈರು

0

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕಿತರ ಸಂಖ್ಯೆ ಏರತೊಡಗಿದೆ. ಗೃಹ ಸಚಿವ ಬಸವರಾಜ್​ ಬೊಮ್ಮಯಿಗೆ ಕೊರೋನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇದೀಗ ಉಪ ಮುಖ್ಯಮಂತ್ರಿ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೂ ಸೋಂಕು ದೃಢಪಟ್ಟಿದೆ. ಈ ಕುರಿತು ಸಚಿವರು ತಮ್ಮ ಟ್ವಿಟರ್​ ಖಾತೆಯಲ್ಲಿ ಅಧಿಕೃತಪಡಿಸಿದ್ದಾರೆ. ಕೋವಿಡ್​-19 ತಪಾಸಣೆಗೆ ಒಳಗಾಗಿದ್ದು, ತಮ್ಮ ವರದಿ ಪಾಸಿಟಿವ್​ ಆಗಿದೆ. ಈ ಹಿನ್ನೆಲೆ ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ ಮುಂದಾಗುತ್ತಿದ್ದೇನೆ. ಈ ಕಾರಣದಿಂದ ಸೋಮವಾರ ನಡೆಯಲಿರುವ ಮುಂಗಾರು ಅಧಿವೇಶನಕ್ಕೆ ಹಾಜರಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಒಳಗಾದವರು ಪರೀಕ್ಷೆಗೆ ಒಳಗಾಗಿ ಮುಂಜಾಗೃತ ಕ್ರಮವಹಿಸಬೇಕು ಎಂದು ಕೇಳಿಕೊಂಡಿದ್ದಾರೆ. ಕೊರೋನಾ ಸೋಂಕು ಹರಡುವಿಕೆ ಸಂದರ್ಭದಲ್ಲಿ ನಗರದಲ್ಲಿ ಕಾರ್ಯ ನಿರ್ವಹಿಸಿದ್ದ ಸಚಿವ ಅಶ್ವತ್ಥ್​ ನಾರಾಯಣ ಸೋಂಕಿತರಿಗೆ ಸೂಕ್ತ ಬೆಡ್​ ಹಾಗೂ ಅಗತ್ಯ ಸೇವೆ ಕಲ್ಪಿಸಲು ಕಾರ್ಯನಿರ್ವಹಿಸಿದ್ದರು.

ರಾಜ್ಯ ಹಾಗೂ ದೇಶದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 52 ಲಕ್ಷ ಗಡಿ ತಲುಪಿದೆ. ದಿನವೊಂದಕ್ಕೆ ದೇಶದಲ್ಲಿ 90 ಸಾವಿರ ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ನಿನ್ನೆ ಮೂರು ಸಾವಿರಕ್ಕೂ ಹೆಚ್ಚು ಜನ ಸೋಂಕಿಗೆ ತುತ್ತಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೂಡ ಜನಸಾಮಾನ್ಯರು ಸೇರಿದಂತೆ ರಾಜಕಾರಣಿಗಳು ಸೋಂಕಿಗೆ ಒಳಗಾಗುತ್ತಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ.

ಇತ್ತೀಚೆಗೆ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಆಹಾರ ಸಚಿವ ಕೆ.ಗೋಪಾಲಯ್ಯ, ಸಚಿವ ಭೈರತಿ ಬಸವರಾಜ್​ ಅವರಿಗೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಇವರು ಕೂಡ ಸೋಮವಾರದಿಂದ ಆರಂಭವಾಗಲಿರುವ ಅಧಿವೇಶದಲ್ಲಿ ಭಾಗಿಯಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here