BIG BREAKING : ‘ಅಗತ್ಯವಸ್ತುಗಳ ಪಟ್ಟಿ’ಯಿಂದ ಈರುಳ್ಳಿ, ಆಲೂಗಡ್ಡೆ, ಸಿರಿಧಾನ್ಯ, ಎಣ್ಣೆಕಾಳು ಔಟ್ : ಸಂಸತ್ತಿನಲ್ಲಿ ವಿಧೇಯಕಕ್ಕೆ ಒಪ್ಪಿಗೆ

0

ಸಂಸತ್ತಿನಲ್ಲಿ ಅಗತ್ಯ ಸರಕುಗಳ ಕಾನೂನು ತಿದ್ದುಪಡಿ ಮಸೂದೆ-2020ಕ್ಕೆ ಅಂಗೀಕರಿಸಲಾಗಿದೆ. ಈ ಮೂಲಕ ಅಗತ್ಯ ವಸ್ತುಗಳ ಪಟ್ಟಿಯಿಂದ ಈರುಳ್ಳಿ, ಆಲೂಗಡ್ಡೆ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಎಣ್ಣೆಕಾಳು ಮತ್ತು ಖಾದ್ಯ ತೈಲಗಳನ್ನು ತೆಗದು ಹಾಕಲಾಗಿದೆ.

ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಹೊಸ ಹೆಜ್ಜೆ ಇರಿಸಿದೆ. ಈರುಳ್ಳಿ, ಆಲೂಗಡ್ಡೆ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಎಣ್ಣೆಕಾಳುಗಳು ಮತ್ತು ಖಾದ್ಯ ತೈಲಗಳನ್ನು ಅಗತ್ಯ ವಸ್ತುಗಳ ಪಟ್ಟಿಯಿಂದ ತೆಗೆದು ಹಾಕಿದೆ.

ಲೋಕಸಭೆಯಲ್ಲಿ ಸೆಪ್ಟೆಂಬರ್ 15ರಂದು ಅಂಗೀಕಾರಗೊಂಡಿದ್ದಂತ ಅಗತ್ಯ ಸರಕುಗಳ ಕಾನೂನು ತಿದ್ದುಪಡಿ ಮಸೂದೆ-2020ಕ್ಕೆ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಈ ಮೂಲಕ ಈ ಮಸೂದೆಯಿಂದ ಸಿರಿಧಾನ್ಯ, ಆಹಾರಕಾಳು, ಈರುಳ್ಳಿ, ಅಲೂಗಡ್ಡೆ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಮೇಲಿನ ನಿಯಂತ್ರಣ ತೆಗೆದುಹಾಕಲಾಗುತ್ತದೆ. ಕೃಷಿ ಕ್ಷೇತ್ರದ ಸುಧಾರಣೆ ಹಾಗೂ ರೈತರ ಆದಾಯ ಹೆಚ್ಚಿಸುವ ಗುರಿ ಹೊಂದಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here