ಸೋಮವಾರ ( ಆ.10) ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಫಲಿತಾಂಶವು ಪ್ರಕಟವಾಗಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆಎಂದಿದ್ದಾರೆ.
ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseeb.kar.nic.in ಅಥವಾ karresults.nic.in ನಲ್ಲಿಯೂ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಸ್ ಎಸ್ ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. .