BIGG NEWS : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ‘ED’ ಎಂಟ್ರಿ.!

0

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ಕೇಸ್ ಗೆ ಇಡಿ ( ಜಾರಿ ನಿರ್ದೇಶನಾಲಯ) ಎಂಟ್ರಿಕೊಟ್ಟಿದೆ.

ಡ್ರಗ್ ಜಾಲದಲ್ಲಿ ಅಕ್ರಮ ಹಣ ವರ್ಗಾವಣೆ ಮತ್ತು ಹವಾಲಾ ದಂಧೆ ಆರೋಪ ಕೇಳಿಬಂದಿದೆ ಎನ್ನಲಾಗಿದ್ದು, ಸಿಸಿಬಿ ಅಧಿಕಾರಿಗಳಿಂದ ಇಡಿ ಅಧಿಕಾರಿಗಳಿಗೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ

ತನಿಖಾ ವರದಿ ಜೊತೆ ಅಕ್ರಮ ಹಣ ಮತ್ತು ಹವಾಲಾ ದಂಧೆಯ ಕೆಲವು ದಾಖಲಾತಿಗಳನ್ನು ಸಿಸಿಬಿ ನೀಡಿದೆ. ಈ ಹಿನ್ನೆಲೆ ಇಡಿ ಅಧಿಕಾರಿಗಳಿಂದ ಇಸಿಐಆರ್ ಕೇಸ್ ದಾಖಲಿಸಲು ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಹೊರಬೀಳುತ್ತಿದೆ. ಸಿಸಿಬಿ ಅಧಿಕಾರಿಗಳಿಂದ ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here