RCB ನಾಯಕ ವಿರಾಟ್ ಕೊಹ್ಲಿ ದಾಖಲೆ ಹಿಂದಿಕ್ಕಿದ ಕನ್ನಡಿಗ ರಾಬಿನ್ ಉತ್ತಪ್ಪ

0

ಐಪಿಎಲ್ 13 ನೇ ಆವೃತ್ತಿಯಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಅನಪೇಕ್ಷಿತ ದಾಖಲೆ ಹಿಂದಿಕ್ಕಿದ್ದಾರೆ.

ಪ್ರಸ್ತುತ ರಾಜಸ್ತಾನ ರಾಯಲ್ಸ್ ತಂಡದ ಪರವಾಗಿ ಆಡುತ್ತಿರುವ ರಾಬಿನ್ ಉತ್ತಪ್ಪ ಅತಿ ಹೆಚ್ಚು ಬಾರಿ ಸೋಲು ಕಂಡ ತಂಡದ ಭಾಗವಾಗಿ ಅನಪೇಕ್ಷಿತ ದಾಖಲೆ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ.

ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ 90 ಪಂದ್ಯಗಳಲ್ಲಿ ಸೋಲು ಕಂಡಿದ್ದು, ರಾಬಿನ್ ಉತ್ತಪ್ಪ 91 ಪಂದ್ಯಗಳಲ್ಲಿ ಪರಾಭವಗೊಂಡಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ 87 ಪಂದ್ಯಗಳಲ್ಲಿ, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 85 ಪಂದ್ಯಗಳಲ್ಲಿ ಪರಾಭವಗೊಂಡಿದ್ದಾರೆ.

LEAVE A REPLY

Please enter your comment!
Please enter your name here